Home » Siddaramaiah: ‘ಮುಡಾ’ ಕ್ಕಿಂತ ದೊಡ್ಡ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ? ಬಡ ಮಕ್ಕಳ ವಸತಿ ಶಾಲೆ ನಿರ್ಮಾಣದ ಭೂಮಿಯನ್ನೇ ಕಬಳಿಸಿದ್ರಾ ಸಿಎಂ? ಸ್ಫೋಟಕ ಮಾಹಿತಿ ಬಹಿರಂಗ !!

Siddaramaiah: ‘ಮುಡಾ’ ಕ್ಕಿಂತ ದೊಡ್ಡ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ? ಬಡ ಮಕ್ಕಳ ವಸತಿ ಶಾಲೆ ನಿರ್ಮಾಣದ ಭೂಮಿಯನ್ನೇ ಕಬಳಿಸಿದ್ರಾ ಸಿಎಂ? ಸ್ಫೋಟಕ ಮಾಹಿತಿ ಬಹಿರಂಗ !!

by Mallika
0 comments

Siddaramaiah: ಮುಡಾ ಹಗರಣದ ವಿಚಾರ ಸಿದ್ದರಾಮಯ್ಯಗೆ ದೊಡ್ಡ ಉರುಳಾಗಿ ಸಂಭವಿಸಿರುವ ಹೊತ್ತಲ್ಲೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ(H D Kumarswamy) ಅವರು ಸಿದ್ದರಾಮಯ್ಯ(CM Siddaramaiah) ವಿರುದ್ಧ ಮುಡಾಕ್ಕಿಂತ ದೊಡ್ಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

ಹೌದು, ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು ‘ಮೂಡ ಹಗರಣ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಹಳೆ ಸೈಟ್ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ಹೊರಹಾಕಿದ ಅವರು ‘ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ. ಒಟ್ಟು 18 ಆರೋಪಿಗಳಿದ್ದಾರೆ’ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಬಳಿಕ ಮಾತನಾಡಿದ ಅವರು ‘ನ್ಯಾಯಾಲಯದಿಂದ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಹಾಕಿ ರಿಲೀಫ್ ಪಡೆದುಕೊಂಡರು. ಇದು 14 ಸೈಟ್ ಗಿಂತ ದೊಡ್ಡ ಹಗರಣ. ಊರಿಗೆ ಬುದ್ದಿ ಹೇಳೊರು ಇಲ್ಲಿ ಏನೇನು ಮಾಡಿದ್ದಿರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು ಪ್ರಕರಣಗಳಿವೆ’ ಎಂದು ಕುಮಾರಸ್ವಾಮಿ ಅವರು ವಿವರ ಕೊಟ್ಟರು.

You may also like

Leave a Comment