4
HK Viswanath: ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಇಳಿಯುವುದು ಖಚಿತ ಹಾಗು ಡಿಕೆ ಶಿವಕುಮಾರ್ ಇಲ್ಲವೇ ಮಲ್ಲಿಕಾರ್ಜುನ್ ಖರ್ಗೆ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ಕೆ ವಿಶ್ವನಾಥ್ ಹೇಳಿದ್ದಾರೆ.
ಸಿದ್ದರಾಮಯ್ಯ ಹೈಕಮಾಂಡ್ಗೆ ಹೆದರಿ ಜಾತಿಗಳ ಮರು ಸಮೀಕ್ಷೆ ಮಾಡಲು ಮುಂದಾಗಿದ್ದಾರೆ, ಮುಂದಿನ ಮೂರು ತಿಂಗಳಲ್ಲಿ ಜಾತಿ ಗಣತಿಯನ್ನು ನಡೆಸುವುದಾಗಿ ತಿಳಿಸಿದ್ದು, ಅದಕ್ಕೆ ಶಿಕ್ಷಕರ ಅವಶ್ಯಕತೆ ಇದೆ ಆದರೆ ಈಗಾಗಲೇ ಶಾಲೆಗಳು ಪ್ರಾರಂಭವಾಗಿರುವುದರಿಂದ ಮುಂದೆ ಯಾವ ಗಣತಿಯು ನಡೆಯುವುದಿಲ್ಲ ಗಣತಿ ನಡೆಸಲು ಸಿದ್ದರಾಮಯ್ಯನವರೇ ಸಿಎಂ ಕುರ್ಚಿಯಲ್ಲಿ ಇರುವುದಿಲ್ಲ ಎಂದು ಇದೀಗ ಹೆಚ್ ಕೆ ವಿಶ್ವನಾಥ್ ತಿಳಿಸಿದ್ದಾರೆ.
