ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82)ನಿಧನರಾಗಿದ್ದಾರೆ. ಈ ಘಟನೆ ತಿಳಿದ ಭಕ್ತರು ಆಕ್ರಂದನ ಹೆಚ್ಚಾಗಿದ್ದು ಮಠದ ಬಳಿ ಭಕ್ತ ಸಾಗರ ಹರಿದು ಬರುತ್ತಿದೆ.
ಶ್ರೀಗಳು ಇಂದು ಸಂಜೆ 6 ಗಂಟೆ 5 ನಿಮಿಷಕ್ಕೆ ಲಿಂಗೈಕ್ಯರಾಗಿದ್ದು, ನಾಳೆ ಸಂಜೆ ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ನಾಳೆ ಸಂಜೆ 4.30ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. 1/2 pic.twitter.com/WvNjQDmkJJ