Home » LLR ನಿಮಯದಲ್ಲಿ ಮಹತ್ವದ ಬದಲಾವಣೆ- ಅರ್ಜಿ ಸಲ್ಲಿಸಿದ 7 ದಿನದಲ್ಲಿ ಪರೀಕ್ಷೆ ಕಡ್ಡಾಯ !!

LLR ನಿಮಯದಲ್ಲಿ ಮಹತ್ವದ ಬದಲಾವಣೆ- ಅರ್ಜಿ ಸಲ್ಲಿಸಿದ 7 ದಿನದಲ್ಲಿ ಪರೀಕ್ಷೆ ಕಡ್ಡಾಯ !!

0 comments

LLR: ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆಯ ಪೂರ್ವಭಾವಿಯಾಗಿ ನಡೆಯುವ LLR ನಿಯಮದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಪರೀಕ್ಷೆಯನ್ನು ಪಡೆಯುವುದು ಕಡ್ಡಾಯವಾಗಿದೆ.

ಹೌದು, ವಾಹನ ಚಾಲನಾ ಕಲಿಕಾ ಪರವಾನಗಿ (ಎಲ್‌ಎಲ್‌ಆರ್‌) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‌ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಪರವಾನಗಿ ಪ್ರಾಧಿಕಾರಿ ಅವರಿಂದ ಅರ್ಜಿ ಪರಿಶೀಲನೆ ನಡೆಸಿದ ಬಳಿಕ ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಪರೀಕ್ಷೆ ತೆಗೆದುಕೊಳ್ಳಬೇಕು. ಏಳು ದಿನಗಳ ಒಳಗೆ ಪರೀಕ್ಷೆ ತೆಗೆದುಕೊಳ್ಳದೇ, ಇದ್ದರೆ ತಂತ್ರಾಂಶದಲ್ಲಿ ಅರ್ಜಿಯು ಸ್ವಯಂ ರದ್ದಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಡಿ.31ರ ಒಳಗೆ ಕಲಿಕಾ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿ ಏಳು ದಿನಗಳ ಒಳಗೆ ಪರೀಕ್ಷೆ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಯೋಗೀಶ್ ಮಾಹಿತಿ ನೀಡಿದ್ದಾರೆ.

You may also like