Home » Bengaluru: ಬೆಂಗಳೂರು: ವಿಐಪಿಗಳು ಸಂಚರಿಸುತ್ತಿರುವ ವೇಳೆ ಸೈರನ್ ಬಳಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ!

Bengaluru: ಬೆಂಗಳೂರು: ವಿಐಪಿಗಳು ಸಂಚರಿಸುತ್ತಿರುವ ವೇಳೆ ಸೈರನ್ ಬಳಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ!

0 comments

Bengaluru: ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ, ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಎಲ್ಲಾ ಘಟಕಾಧಿಕಾರಿಗಳಿಗೆ ಸೂಚಿಸಲಾಗಿ ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

ಅನಾವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ.

ವಿಐಪಿ ಸಂಚಾರದ ವೇಳೆ ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ.

ಸೈರನ್‌ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್ ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಆದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ / ತಮ್ಮ ಆಧೀನದ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಇದನ್ನೂ ಓದಿ: Bengaluru: ಇನ್ಮುಂದೆ ಆಸ್ತಿಗಳ ಡಿಜಿಟಲ್ ದಾಖಲೆಗಳು ನಾಡ ಕಚೇರಿಯಲ್ಲೂ ಸಿಗಲಿದೆ: ಕಂದಾಯ ಸಚಿವ ಕೃಷ್ಣಭೈರೇ ಗೌಡ

You may also like