Home » Snehamai Krishna: ಸಿಎಂ ಸಿದ್ದು ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ !!

Snehamai Krishna: ಸಿಎಂ ಸಿದ್ದು ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ !!

0 comments

Snehamai Krishna: ಮೈಸೂರಿನ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಿ ಸಂಕಷ್ಟ ತಂದಿಟ್ಟ ದೂರುದಾರ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಎದುರಾಗಿದೆ.

ಹೌದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. ಮೈಸೂರಿನ 3ನೇ JMFC ಕೋರ್ಟ್‌ ಶಿಕ್ಷೆ ಪ್ರಕಟ ಮಾಡಿದ್ದು, 2 ಲಕ್ಷ ರೂಪಾಯಿ ಹಣ ಪಾವತಿ ಮಾಡಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೊರ್ಟ್‌ ತೀರ್ಪು ನೀಡಿದೆ.

ಏನಿದು ಪ್ರಕರಣ?
ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕುಮಾರ್ ಎಂಬುವರು ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಪತ್ರಿಕೆ ನಡೆಸಲು ಹಾಗೂ ಗೃಹ ಉಪಯೋಗಕ್ಕಾಗಿ 1.75 ಲಕ್ಷ ರೂಪಾಯಿ ಸ್ನೇಹಮಯಿ ಕೃಷ್ಣ ಪಡೆದಿದ್ದರು ಅಂತ ಕುಮಾರ್ ಆರೋಪಿಸಿದ್ದರು. ಈ ಸಂಬಂಧ ಸ್ನೇಹಮಯಿ ಕೃಷ್ಣ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಆದರೆ ಈ ಚೆಕ್ ಬೌನ್ಸ್ ಆಗಿತ್ತು ಅಂತ ಆರೋಪಿಸಿ, ಕೋರ್ಟ್‌ನಲ್ಲಿ ಕೇಸ್ ಹಾಕಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.

You may also like