Home » ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಅಶ್ಲೀಲ ಫೋಟೋ!! ಸೂಕ್ತ ಕಾನೂನು ಕ್ರಮ ಜರುಗಿಸಲು ಹಿಂದೂಪರ ಸಂಘಟನೆಗಳಿಂದ ಒತ್ತಾಯ

ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಅಶ್ಲೀಲ ಫೋಟೋ!! ಸೂಕ್ತ ಕಾನೂನು ಕ್ರಮ ಜರುಗಿಸಲು ಹಿಂದೂಪರ ಸಂಘಟನೆಗಳಿಂದ ಒತ್ತಾಯ

0 comments

ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮಿ ಕೊರಗಜ್ಜ ದೈವದ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಹರಿಯ ಬಿಟ್ಟದ್ದಕ್ಕೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಕಿಡಿಗೇಡಿಗಳು ಸ್ವಾಮಿ ಕೊರಗಜ್ಜ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇದು ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಆರೋಪಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಗಳು ಕೇಳಿ ಬಂದಿವೆ.

ಈ ಬಗ್ಗೆ ಈಗಾಗಲೇ ಹಿಂದೂ ಜಾಗರಣ ವೇದಿಕೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದೆ.

You may also like

Leave a Comment