Areca Problem: ಆ. 21 ರಂದು ನವದೆಹಲಿಯ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ರಾಜ್ಯ ಸಂಸದರ ನಿಯೋಗ ಭೇಟಿ ಮಾಡಿ, ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಪರಿಹಾರ ಕ್ರಮಗಳಿಗಾಗಿ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಸಕಾರಾತ್ಮಕವಾಗಿ ಸ್ಪದಿಸಿದ್ದಾರೆ.
ಶೀಘ್ರದಲ್ಲೇ ರಾಜ್ಯಕ್ಕೆ ಅಡಿಕೆ ಬೆಳೆ ಕುರಿತು ಮಾಹಿತಿ ಪಡೆದುಕೊಳ್ಳಲು ಖುದ್ದು ತಾನೇ ಅಧಿಕಾರಿ ಹಾಗೂ ವಿಜ್ಞಾನಿಗಳ ತಂಡದೊಂದಿಗೆ ರಾಜ್ಯದಕ್ಕೆ ಬೇಡಿ ನೀಡುವ ಭರವಸೆಯನ್ನು ನೀಡಿದ್ದಾರೆ. ಕೇಂದ್ರ ಸಚಿವರು ಇನ್ನೇನು 2-3 ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಿ ಅಡಿಕೆ ಸಂಬಂಧ ರಾಜ್ಯದ ಕೃಷಿಕರು ಅನುಭವಿಸುತ್ತಿರುವ ತೊಂದರೆ ಬಗ್ಗೆ ಮಾಹತಿ ಪಡೆಯಲಿದ್ದಾರೆ. ಅಡಿಕೆಗೆ ಭಾದಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗ, ಶಿಲೀಂದ್ರ ರೋಗದ ಬಗ್ಗೆ ವಿಜಾನಿಗಳ ತಂಡ ಈಗಾಗಲೇ ಪರೀಕ್ಷೆ ನಡೆಸುತ್ತಿದ್ದು, ವರದಿಯನ್ನು ಆದಷ್ಟು ಬೇಗ ನೀಡಲು ಸೂಚಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.
ನಿಯೋಗದ ನೇತೃತ್ವವನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರ ಸ್ವಾಮಿ, ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ವಹಿಸಿದ್ದರು.
ಇನ್ನುಳಿದಂತೆ ನಿಯೋಗದಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ, ಕಾಗೇರಿ (ಉತ್ತರ ಕನ್ನಡ), ಬಿ ವೈ ರಾಘವೇಂದ್ರ (ಶಿವಮೊಗ್ಗ), ಕ್ಯಾಪ್ಟನ್ ಬ್ರಿಜೇಶ್ ಚೌಟ (ದಕ್ಷಿಣ ಕನ್ನಡ) ಮತ್ತು ಶ್ರೀ ಕೋಟ ಶ್ರೀನಿವಾಸ ಪೂಜಾರಿ (ಉಡುಪಿ ಮತ್ತು ಚಿಕ್ಕಮಗಳೂರು) ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ), ಯಧುವೀರ್ ಒಡೆಯರ್ (ಮೈಸೂರು) ಮತ್ತು ಶ್ರೀ ಗೋವಿಂದ ಕಾರಜೋಳ (ಚಿತ್ರದುರ್ಗ) ಅವರು ಮತ್ತು ಮಾಜಿ ಸಚಿವ ಶ್ರೀ ಆರಗ ಜ್ಞಾನೇಂದ್ರ ಮತ್ತು ಕ್ಯಾಂಪ್ಕೋ ಅಧ್ಯಕ್ಷ ಶ್ರೀ ಕಿಶೋರ್ ಕೊಡ್ಗೆ ಈ ನಿಯೋಗದ ಭಾಗವಾಗಿದ್ದರು.
Death: ರೀಲ್ಸ್ ಗೆ ಬಲಿಯಾದ ಮತ್ತೊಬ್ಬ ವಿದ್ಯಾರ್ಥಿ!
