Home » ನೇಣು ಬಿಗಿದು ಮಗ ಆತ್ಮಹತ್ಯೆ | ಮನನೊಂದ ತಾಯಿ ಚಲಿಸುತ್ತಿದ್ದ ಕಾರಿನ ಅಡಿಗೆ ಬಿದ್ದು ಆತ್ಮಹತ್ಯೆ

ನೇಣು ಬಿಗಿದು ಮಗ ಆತ್ಮಹತ್ಯೆ | ಮನನೊಂದ ತಾಯಿ ಚಲಿಸುತ್ತಿದ್ದ ಕಾರಿನ ಅಡಿಗೆ ಬಿದ್ದು ಆತ್ಮಹತ್ಯೆ

by Praveen Chennavara
0 comments

ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗ ಮೃತಪಟ್ಟಿದ್ದಾನೆ.

ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್ ನಿವಾಸಿ ಗುರುಚರಣ್ ಉಡುಪಾ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಸೆಕೆಂಡ್ ಪಿಯುಸಿ ಓದುತ್ತಿದ್ದ.

ಈ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ, ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಚಲಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆರಂಭದಲ್ಲಿ ಇದು ಅಪಘಾತ ಎಂದು ಹೇಳಲಾಗಿತ್ತು.ಆದರೆ ಬಳಿಕ ಇದು ಆತ್ಮಹತ್ಯೆ ಎಂದು ತಿಳಿದು ಬಂತು.

ತನ್ನ ಸ್ನೇಹಿತರ ಜೊತೆ ಜಗಳವಾಡಿಕೊಂಡಿದ್ದ ಮಗ ಸಾವಿನ ದಾರಿ ಹುಡುಕುತ್ತಾನೆ. ಆಗ ಆತ ಮನೆಯಲ್ಲಿ ನೇಣು ಬಿಗಿದುಕೊಳ್ಳುತ್ತಾನೆ. ವಿಚಾರ ತಿಳಿದ ತಕ್ಷಣ ಮಗನನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮಗನ ಸಾವಿನ ಸುದ್ದಿ ಕೇಳಿ ತಾಯಿ ಲೀಲಾವತಿ ಆಸ್ಪತ್ರೆಯಿಂದ ಹೊರಬಂದು ಕಾರಿನ ಅಡಿಗೆ ಬೀಳುತ್ತಾಳೆ. ಆಕೆಯೂ ಪ್ರಾಣಕಳೆದುಕೊಳ್ಳುತ್ತಾಳೆ.

ಆತ್ಮಹತ್ಯೆ ಪ್ರಕರಣ ಸದ್ಯ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದು, ಲೀಲಾವತಿ ಸಾವು ಪ್ರಕರಣ ವಿಜಯನಗರ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.

You may also like

Leave a Comment