Soujanya Murder Case: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಅರ್ಜಿಗಳ ತೀರ್ಪು ಪ್ರಕಟವಾಗಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಮಾಡಲಾಗಿತ್ತು. ಪ್ರಕರಣದ ಮರುತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಆರೋಪಿ ಸಂತೋಷ್ ರಾವ್ ಅಕ್ರಮ ಬಂಧನಕ್ಕೆ ಪರಿಹಾರ ಕೋರಿದ್ದ ಅರ್ಜಿ ಕೂಡಾ ವಜಾ ಆಗಿದೆ.
ಮೂರೂ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು ಹೈಕೋರ್ಟ್. ಇದು ಹೈಕೋರ್ಟ್ ವಿಭಾಗೀಯ ಪೀಠದಿಂದ ಇಂದು ತೀರ್ಪು ಪ್ರಕಟವಾಗಿದೆ. ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಪೀಠದಿಂದ ಆದೇಶ ಬಂದಿದ್ದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ ಹೈಕೋರ್ಟ್.
ಮುಖ್ಯಾಂಶಗಳು:
ಮರು ತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ.
ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ವಜಾ.
ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶ ಎತ್ತಿ ಹಿಡಿದ ಹೈಕೋರ್ಟ್.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅನೇಕ ಹೇಯ ಕೃತ್ಯಗಳ ಬಗ್ಗೆ, ಅದಕ್ಕೆ ಕಾರಣವಾಗಿರುವ ಎನ್ನಲಾಗಿರುವ ಧಣಿಗಳ ಮತ್ತು ಅವರ ಪರಿವಾರದ ವಿರುದ್ಧ ನಿರಂತರವಾಗಿ ಹೋರಾಟಗಳು ನಡೆಯುತ್ತಲೇ ಇವೆ. ಸೌಜನ್ಯ ಗೌಡ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು ನೀಡಿದೆ. ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎಂದು ಹೇಳಿದೆ ಹೈಕೋರ್ಟ್. ಈ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿ ವಜಾ ಆಗಿದೆ.
