Home » Dakshina Kannada: ಸೌಜನ್ಯ ಕೇಸ್ : ಯುಟ್ಯೂಬ್ ವಿಡಿಯೋ ವೈರಲ್ ; ಎಸ್‌ಪಿಗಳಿಗೆ ADGP ಮಹತ್ವದ ಸೂಚನೆ!

Dakshina Kannada: ಸೌಜನ್ಯ ಕೇಸ್ : ಯುಟ್ಯೂಬ್ ವಿಡಿಯೋ ವೈರಲ್ ; ಎಸ್‌ಪಿಗಳಿಗೆ ADGP ಮಹತ್ವದ ಸೂಚನೆ!

0 comments

Dakshina Kannada: ಧರ್ಮಸ್ಥಳದಲ್ಲಿ ನಡೆದಿದ್ದ ಕುಮಾರಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಯೂಟ್ಯೂಬರ್ ಸಮೀರ್ ಎಂಬಾತ ಮಾಡಿದ್ದ ವಿಡಿಯೋ ಭಾರೀ ವೈರಲ್ ಆಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಉಂಟು ಮಾಡಿದೆ.

ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್‌ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಮೀರ್‌ ಮಾಡಿರುವ ವೀಡಿಯೋ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರದೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ನಿರ್ಲಕ್ಷ್ಯ ವಹಿಸಿದ್ದು, ಈ ಕುರಿತು ಪರ-ವಿರೋಧದ ಚರ್ಚೆ ಹುಟ್ಟಿಕೊಂಡಿರುವ ಕಾರಣ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ ಎಂದು ಎಡಿಜಿಪಿ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಹಾಗಾಗಿ ಎಲ್ಲಾ ಪೊಲೀಸ್‌ ಘಟಕಗಳು ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ಚುರುಕಾಗಿ ಕೆಲಸ ಮಾಡಬೇಕು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

You may also like