Home » Indian Railway: ಬೆಂಗಳೂರು–ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

Indian Railway: ಬೆಂಗಳೂರು–ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

0 comments

Indian Railway: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ರೈಲು ಸಂಖ್ಯೆ 06255 ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಅ.18, 21 ಮತ್ತು 25 ರಂದು ಬೆಳಗ್ಗೆ 8:05 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 2:45 ಗಂಟೆಗೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣವನ್ನು ತಲುಪಲಿದೆ. ಈ ರೈಲಿಗೆ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೇಟೆ, ಕಾಟ್ಪಾಡಿ, ಅರಕ್ಕೋಣಂ ತಿರುವಳ್ಳೂರ್ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.

ರೈಲು ಸಂಖ್ಯೆ 06256 ಎಂಜಿಆರ್ ಚೆನ್ನೈ ಸೆಂಟ್ರಲ್–ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಅ.18, 21 ಮತ್ತು 25 ರಂದು ಸಂಜೆ 4:30 ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 10:45 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ. ಈ ರೈಲಿಗೆ ತಿರುವಳ್ಳೂರ್, ಅರಕ್ಕೋಣಂ, ಕಾಟ್ಪಾಡಿ, ಜೋಲಾರ್ಪೇಟೆ, ಬಂಗಾರಪೇಟೆ, ಕೃಷ್ಣರಾಜಪುರಂ ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.

ಇದನ್ನೂ ಓದಿ:Electricity: 30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅನುಮೋದನೆ: ಡಿಕೆ ಶಿವಕುಮಾರ್‌

ಈ ರೈಲು 11 ಸಾಮಾನ್ಯ ದ್ವಿತೀಯ ದರ್ಜೆಯ ಕೋಚ್‌ಗಳು, 1 ಎಸಿ ಚೇರ್ ಕಾರ್, 1 ಎಸಿ 3-ಟೈರ್ ಕೋಚ್, 4 ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ಗಳು ಹಾಗೂ 2 ಎಸ್‌ಎಲ್‌ಆರ್‌ಡಿ ಕೋಚ್‌ಗಳನ್ನು ಒಳಗೊಂಡಿರುತ್ತದೆ.

You may also like