4
Operation Sindoor: ಅಪರೇಷನ್ ಸಿಂಧೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ (ಮೇ 09) ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.
