Home » Indian Railway: ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ!

Indian Railway: ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ!

0 comments

Indian Railway: ಸ್ವಾತಂತ್ರ್ಯೋತ್ಸವ ಮತ್ತು ಗಣೇಶ ಚತುರ್ಥಿಯ ಪ್ರಯುಕ್ತ ಯಶವಂತಪುರದಿಂದ ಮಡಗಾಂವ್‌, ಎಸ್‌ಎಂವಿಟಿಯಿಂದ ಬೆಳಗಾವಿಗೆ ವಿಶೇಷ ರೈಲುಗಳ ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಆ.14ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಡಲಿದೆ. ಆ.15ರಂದು ಸಂಜೆ 6.50ಕ್ಕೆ ಮಡಗಾಂವ್‌ ತಲುಪಲಿದೆ. ಆ.17ರಂದು ರಾತ್ರಿ 10.15ಕ್ಕೆ ಮಡಗಾಂವ್‌ನಿಂದ ಹೊರಟು ಮರುದಿನ ಸಂಜೆ 4.30ಕ್ಕೆ ಯಶವಂತಪುರ ತಲುಪಲಿದೆ.

ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಲಿದೆ.

ಎಸ್ಎಂವಿಟಿ ಬೆಂಗಳೂರು –ಬೆಳಗಾವಿ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 22ರಂದು ಸಂಜೆ 7ಕ್ಕೆ ಎಸ್ಎಂವಿಟಿಯಿಂದ ಹೊರಡಲಿದೆ. ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಆ. 23ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5ಕ್ಕೆ ಎಸ್ಎಂವಿಟಿ ತಲುಪಲಿದೆ.

ಇನ್ನೊಂದು ರೈಲು ಆ. 26ರಂದು ಸಂಜೆ 7ಕ್ಕೆ ಎಸ್ಎಂವಿಟಿ ಯಿಂದ ಹೊರಟು ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ಆ.27ರಂದು ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5ಕ್ಕೆ ಎಸ್ಎಂವಿಟಿ ತಲುಪಲಿದೆ.

ಈ ರೈಲುಗಳು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ ಎಂದು ನೈರುತ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: Prabhakara Kalyani: ‘ಕಾಂತಾರ’ ಚಿತ್ರದ ಮತ್ತೊಬ್ಬ ಖ್ಯಾತ ನಟ ಹೃದಯಾಘಾತಕ್ಕೆ ಬಲಿ!!

You may also like