BJP: ರಾಜ್ಯ ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರುತ್ತಿರುವ ನಡುವೆಯೇ ಮಾಜಿ ಸಚಿವ ಬಿಜೆಪಿಯ ಪ್ರಭಲ ನಾಯಕ ಶ್ರೀರಾಮುಲು ಅವರು ತಾನು ಪಕ್ಷಕ್ಕೆ ಗುಡ್ ಬೈ ಹೇಳುವುದಾಗಿ ಮಾತನಾಡಿದ್ದಾರೆ.
ಹೌದು, ನಿನ್ನೆ ರಾಜ್ಯ ಬಿಜೆಪಿ(BJP)ಯ ಕೋರ್ ಕಮಿಟಿ ಸಭೆ ನಡೆದಿದ್ದು ಈ ಸಭೆಯಲ್ಲಿ ಹಲವು ಬಿಜೆಪಿ ನಾಯಕರ ಅಸಮಾಧಾನ ಸ್ಪೋಟಗೊಂಡಿದೆ. ಅಂತೆಯೇ ಬಿಜೆಪಿ ನಾಯಕರ ವಿರುದ್ಧ ಕೋರ್ ಕಮಿಟಿ ಸದಸ್ಯ ಹಾಗೂ ಮಾಜಿ ಶಾಸಕ ಶ್ರೀರಾಮುಲು ಮುನಿಸಿಕೊಂಡ ಘಟನೆ ನಡೆದಿದೆ.
ಅಂದಹಾಗೆ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು ಈ ವೇಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಬಿ.ಶ್ರೀರಾಮುಲು ಮೇಲೆಯೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಗಂಭೀರ ಆರೋಪ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಶ್ರೀರಾಮುಲು ಕೆಲಸ ಮಾಡಿಲ್ಲ ಎನ್ನುವ ಹಾಗೆ ಮಾತನಾಡಿದ್ದಾರೆ. ಇದರಿಂದ ಶ್ರೀರಾಮುಲು ಅಸಮಾಧಾನ ಹೊರ ಹಾಕಿದ್ದಾರೆ.
ನಾನು ಕಷ್ಟಪಟ್ಟು ಶ್ರಮವಹಿಸಿ, ಉಪ-ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಸುಖಾಸುಮ್ಮನೆ ದೂರು ನೀಡಲಾಗಿದೆ, ಇದು ಸರಿಯಲ್ಲ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆಯೇ ಸಿಗುವುದಿಲ್ಲ. ಹೀಗಾಗಿ ನಾನು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳ್ತೀನಿ, ಪಕ್ಷ ತೊರೆಯುವಾಗ ಹೇಳಿಯೇ ಹೋಗುತ್ತೇನೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
