Home » SSLC: ಮಾರ್ಚ್ 21ರಿಂದ SSLC ಪರೀಕ್ಷೆ – ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ!!

SSLC: ಮಾರ್ಚ್ 21ರಿಂದ SSLC ಪರೀಕ್ಷೆ – ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ!!

0 comments

SSLC: ಮಾರ್ಚ್ 21ರಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಈಗಾಗಲೇ ಮಂಡಳಿ ಎಲ್ಲಾ ರೀತಿಯ ತಯಾರಿ ನಡೆಸಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ಈ ನಿಯಮಗಳನ್ನು ಪಾಲಿಸಬೇಕೆಂದು ಸೂಚನೆಯನ್ನು ಕೂಡ ಹೊರಡಿಸಿದೆ.

ಸೂಚನೆಗಳು:

1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.

2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ

3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.

4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.

6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.

8) ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

You may also like