Home » SSLC ಗಣಿತ ಪ್ರಶ್ನೆ ಪತ್ರಿಕೆ ಲೀಕ್?

SSLC ಗಣಿತ ಪ್ರಶ್ನೆ ಪತ್ರಿಕೆ ಲೀಕ್?

0 comments

SSLC: ಇಂದು ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಗಣಿತ ಪ್ರಶ್ನೆ ಪತ್ರಿಕೆ ಲೀಕ ಆಗಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಲ್ಲಗಳೆದಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಎಚ್‌. ಎನ್‌. ಗೋಪಾಲಕೃಷ್ಣ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ಸೋರಿಕೆ ಆಗುವುದು ಅಸಾಧ್ಯ. ಕೆಲ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಿದ್ದಾರೆ. ನಾವು ಈಗಾಗಲೇ ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

You may also like