SSLC BOARD: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧ ವಾರ್ಷಿಕ ಪರೀಕ್ಷೆಯ (SSLC Exams) ವೇಳಾಪಟ್ಟಿ (Time table) ಪ್ರಕಟವಾಗಿದ್ದು, ಸೆಪ್ಟೆಂಬರ್ 12 ರಿಂದ ಸೆಪ್ಟೆಂಬರ್ 19 ರವರೆಗೆ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ (Mid term exam) ನಡೆಯಲಿದೆ.
ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಎಸ್.ಎಸ್.ಎಲ್.ಸಿ ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಸೂಚಿಸಲಾಗಿತ್ತು. ಹೀಗಾಗಿ ಎಸ್.ಎಸ್.ಎಲ್.ಸಿ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ:IAS Transfer: ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಆದೇಶ
www.kseab.karnataka.gov.in ವೆಬ್ ಸೈಟ್ ನಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲೆಯ ನೋಟೀಸ್ ಬೋರ್ಡ್ ನಲ್ಲಿ ಪ್ರಕಟಿಸಲು ಸೂಚಿಸಲಾಗಿದೆ.
