Scholarship: ಸರ್ಕಾರಿ ಶಾಲಾಕಾಲೇಜುಗಳಲ್ಲಿ (government school) ಕಲಿಯುತ್ತಿರುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ‘ದೀಪಿಕಾ ವಿದ್ಯಾರ್ಥಿ ವೇತನ’ ಯೋಜನೆ ಪ್ರಯೋಜನ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ”ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ದೀಪಿಕಾ ವಿದ್ಯಾರ್ಥಿ ವೇತನವನ್ನು (Scholarship) ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಉಪಯೋಗ ಆಗುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.
