Bengaluru: ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ (Chinnaswamy Stampede) ಬಂಧನಕ್ಕೆ ಒಳಗಾಗಿದ್ದ ಆರ್‌ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಮತ್ತು ಡಿಎನ್‌ಎ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಸುನೀಲ್ ಮ್ಯಾಥ್ಯೂಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಾಲ್ತುಳಿತ ಪ್ರಕರಣದಲ್ಲಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್ ಇದ್ದ ಪೀಠವು ಸೋಸಲೆ, ಮ್ಯಾಥ್ಯೂ, ಕಿರಣ್ ಮತ್ತು ಶಮಂತ್ ರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಯಾರೂ ದೇಶ ಬಿಟ್ಟು ಹೋಗದಂತೆ ತಾಕೀತು ವಿಧಿಸಿದೆ.
ಪತಿ ನಿಖಿಲ್ ಸೋಸಲೆ ಅಕ್ರಮ ಬಂಧನ ಪ್ರಶ್ನಿಸಿ ಪತ್ನಿ ಮಾಳವಿಕಾ ನಾಯ್ಕ್ ರಿಟ್ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇದೀಗ ಜಾಮೀನು ಆದೇಶ ನೀಡಿದೆ.
