Bengaluru Stampede: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಹಾಸನ ಮೂಲದ ಭೂಮಿಕ್ (20) ಅಂತ್ಯಕ್ರಿಯೆ ಇಂದು ನಡೆಯಲಿದೆ.
ಭೂಮಿಕ್ ಹುಟ್ಟೂರು ಕುಪ್ಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹುಟ್ಟೂರಿಗೆ ಭೂಮಿಕ್ ಮೃತದೇಹ ಆಗಮಿಸಿದೆ.
ಇಂದು ಮಧ್ಯಾಹ್ನದ ವೇಳೆಗೆ ಕುಪ್ಗೋಡು ಗ್ರಾಮದಲ್ಲಿ ಭೂಮಿಕ್ ಅಂತ್ಯಕ್ರಿಯೆ
ನಡೆಯಲಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಕುಪ್ಪುಗೋಡು ಗ್ರಾಮದ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ ಭೂಮಿಕ್. ಬೆಂಗಳೂರಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಯುವಕ, ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಕುಟುಂಬ ಸಮೇತ ನೆಲೆಸಿದ್ದರು.
ಡಿ.ಟಿ.ಲಕ್ಷ್ಮಣ ಅವರು ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದರು. ನಿನ್ನೆ ಕಾಲೇಜಿಗೆ ತೆರಳಿದ್ದ ಭೂಮಿಕ್, ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ. ಈ ವೇಳೆ ಅವರು ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
