Home » ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿ !! |ಸುವರ್ಣ ಸೌದದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿಕೆ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿ !! |ಸುವರ್ಣ ಸೌದದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿಕೆ

by ಹೊಸಕನ್ನಡ
0 comments

ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಾಗೆಯೇ ಇನ್ನೆರಡು ಕಾಯ್ದೆಗಳು ಸದ್ಯದಲ್ಲೇ ರಾಜ್ಯದಲ್ಲಿ ನಿಷೇಧವಾಗುವ ಎಲ್ಲಾ ಸೂಚನೆಗಳು ಕಂಡು ಬರುತ್ತಿದ್ದು, ಇಂಧನ ಸಚಿವರ ಹೇಳಿಕೆ ಅದನ್ನು ಬಲಪಡಿಸುತ್ತಿದೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ನಂತರ ಲವ್ ಜಿಹಾದ್ ವಿರುದ್ಧ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನು ಜಾರಿಗೆ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದರು.

ಮತಾಂತರವನ್ನು ಮಹಾತ್ಮ ಗಾಂಧಿ, ವಿವೇಕಾನಂದರು ಕೂಡಾ ವಿರೋಧಿಸಿದ್ದರು. ಈಗ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದರು.

ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ. ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬರಲಿ, ಉತ್ತರ ನೀಡಲು ನಾವು ಸಿದ್ಧವಿದ್ದೇವೆ ಎಂದು ಹೇಳಿದರು.

You may also like

Leave a Comment