Home » DA: ರಾಜ್ಯ ಸರ್ಕಾರಿ ನೌಕರರರಿಗೆ `ತುಟ್ಟಿಭತ್ಯೆ’ ಸಿಗಲಿದೆ ನಗದು ರೂಪದಲ್ಲಿ!?

DA: ರಾಜ್ಯ ಸರ್ಕಾರಿ ನೌಕರರರಿಗೆ `ತುಟ್ಟಿಭತ್ಯೆ’ ಸಿಗಲಿದೆ ನಗದು ರೂಪದಲ್ಲಿ!?

0 comments

DA: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

ಸೂಚಿತ ವಿಷಯದ ಅನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುತ್ತದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಇದನ್ನೂ ಓದಿ;Operation Sindoor: ಆಪರೇಷನ್‌ ಸಿಂಧೂರ್‌ನಲ್ಲಿ AI ಪ್ರಮುಖ ಪಾತ್ರ ವಹಿಸಿದೆ – ಭಾರತೀಯ ಸೇನೆ

ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಕೋರಿದೆ.

You may also like