Home » Karnataka: ಬಸ್ ದರ ಏರಿಕೆಗೆ ರಾಜ್ಯ ಸರ್ಕಾರ ಸಜ್ಜು!

Karnataka: ಬಸ್ ದರ ಏರಿಕೆಗೆ ರಾಜ್ಯ ಸರ್ಕಾರ ಸಜ್ಜು!

0 comments

Karnataka: ರಾಜ್ಯ ಸರ್ಕಾರ (Karnataka) ವಿದ್ಯುತ್ ದರ ಏರಿಕೆಯ ಮಾದರಿಯಲ್ಲೇ ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಸಾರಿಗೆ ಸಂಸ್ಥೆಗಳ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ.

ಕೆಇಆರ್‌ಸಿ(KERC) ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1989ರ ಅಡಿಯಲ್ಲಿ ದರ ನಿಯಂತ್ರಣ ಸಮಿತಿಯನ್ನ ರಾಜ್ಯ ಸರ್ಕಾರ ರಚನೆ ಮಾಡಿದೆ. ಈ ಸಮಿತಿ ಪ್ರತಿ ವರ್ಷ ರಸ್ತೆ ಸಾರಿಗೆ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಿದೆ.

You may also like