10
Ration Card: ಈಗಾಗಲೇ ಸಲ್ಲಿಕೆ ಮಾಡಿರುವ ಪಡಿತರ ಚೀಟಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಆಹಾರ ಇಲಾಖೆಯಿಂದ ಸದ್ಯ ಹೊಸ ಪಡಿತರ ಚೀಟಿಗಳನ್ನು ನೀಡಲಾಗುತ್ತಿಲ್ಲ. ಅರ್ಜಿಗಳನ್ನೂ ಆಹ್ವಾನಿಸಿಲ್ಲ. 2023 ರ ಮಾರ್ಚ್‌ವರೆಗೆ ಸ್ವೀಕರಿಸಿದ ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಲು ಕ್ರಮ ವಹಿಸಲಾಗಿದೆ. ಸುಳ್ಳು ಸುದ್ದಿ ಕುರಿತು ಸಾರ್ವಜನಿಕರು ಎಚ್ಚರವಹಿಸಬೇಕು. ಪಡಿತರ ವಿತರಣೆ ಹಾಗೂ ಪಡಿತರ ಚೀಟಿ ಸಮಸ್ಯೆಗಳಿಗೆ ವೆಬ್‌ಸೈಟ್ www.ahara.kar.nic.in ಸಂಪರ್ಕಿಸಿ ಆನ್‌ಲೈನ್ ಮೂಲಕ ನೇರವಾಗಿ ದೂರು ಸಲ್ಲಿಸಬಹುದು.
