7
Belthangady: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣ ಮಾಡುತ್ತಿದ್ದ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಮೇ.2 ರಂದು ನಡೆದಿದೆ.
ಪ್ರಯಾಣಿಕರು ಬಸ್ಸಿನಲ್ಲಿ ತುಂಬಿಕೊಂಡಿದ್ದು, ಬಸ್ ಮೇಲೆ ಏಕಾಏಕಿ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಗೊಳಗಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ ಕಳುಹಿಸಿಕೊಡಲಾಗಿದೆ ಎಂದು ವರದಿಯಾಗಿದೆ.
