Home » ಹಾಸ್ಟೆಲ್ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ!! ಚುರುಕುಗೊಂಡ ತನಿಖೆ-ಅಗೆದಷ್ಟು ಹೊರಬರುತ್ತಿದೆ ಸತ್ಯ

ಹಾಸ್ಟೆಲ್ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ!! ಚುರುಕುಗೊಂಡ ತನಿಖೆ-ಅಗೆದಷ್ಟು ಹೊರಬರುತ್ತಿದೆ ಸತ್ಯ

0 comments

ತಮಿಳುನಾಡಿನ ಕಲ್ಲಕುರುಚಿಯಲ್ಲಿ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಂಗೆ , ಪ್ರತಿಭಟನೆಗಳ ಬಳಿಕ ಇಬ್ಬರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಕಲ್ಲಕುರುಚಿಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು ತನಿಖೆಗೆ ಆಗ್ರಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು.

ವಿದ್ಯಾರ್ಥಿನಿಯ ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ದೇಹದ ಮೇಲೇ ಗಂಭೀರ ಗಾಯಗಳು, ರಕ್ತ ಹೆಪ್ಪುಗಟ್ಟಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾದ ಶಿಕ್ಷಕಿಯರನ್ನು ಬಂಧಿಸಲಾಗಿದೆ.

ಸದ್ಯ ಸಾವಿನ ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿ ಹಲವು ಆಯಾಮಗಳ ತನಿಖೆ ನಡೆಸುತ್ತಿದ್ದಾರೆ. ಸಂಪೂರ್ಣ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಹೊರಬರಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You may also like

Leave a Comment