Home News ಸುಬ್ರಹ್ಮಣ್ಯ: ಸಂಸದ ಯದುವೀರ ದತ್ತ ಒಡೆಯರ್‌ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಸುಬ್ರಹ್ಮಣ್ಯ: ಸಂಸದ ಯದುವೀರ ದತ್ತ ಒಡೆಯರ್‌ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

Hindu neighbor gifts plot of land

Hindu neighbour gifts land to Muslim journalist

ಸುಬ್ರಹ್ಮಣ್ಯ: ಮೈಸೂರಿನ ಲೋಕಸಭಾ ಸದಸ್ಯ ಯದುವೀರ ದತ್ತ ಒಡೆಯರ್‌ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ರಾಷ್ಟ್ರೀಯ ವಿದ್ವತ್‌ ಸಮ್ಮೇಳನ ವಿಶ್ವ ಸಂಭ್ರಮವು ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವ ಉದ್ದೇಶದಿಂದ ಸಂಸದರು ಆಗಮಿಸಿದ್ದು, ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರವಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್‌ ಇಂಜಾಡಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್‌ ಅವರು ಸಂಸದರನ್ನು ಪೂರ್ಣಕುಂಭ ಸ್ವಾಗತದಿಂದ ಆತ್ಮೀಯವಾಗಿ ಬರಮಾಡಿಕೊಂಡರು.