Home » ಸುಬ್ರಹ್ಮಣ್ಯ | ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಸುಬ್ರಹ್ಮಣ್ಯ | ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

0 comments

ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಗೆ ಸುಮಾರು 55 ವರ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದೆ.

ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ ಎಸ್.ಐ ಮೋಹನ್. ಕೆ ಮಹಾಲಕ್ಷ್ಮಿ ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment