Home » ಸುಬ್ರಹ್ಮಣ್ಯ : ಶಾಲಾಮುಖ್ಯ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿ : 7 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಸುಬ್ರಹ್ಮಣ್ಯ : ಶಾಲಾಮುಖ್ಯ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿ : 7 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

by Praveen Chennavara
0 comments

ಕಡಬ : ಕಡಬ ತಾಲೂಕಿನ ಸುಬ್ರಹ್ಮಣ್ಯ ಸ.ಮಾ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜು.2 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ 7 ಮಂದಿ ಆರೋಪಿಗಳಿಗೆ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಸ.ಮಾ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲಾ ಪಿ.ಜಿ ಅವರು ನೀಡಿದ ದೂರಿನಂತೆ ಎಸ್ ಡಿ ಎಂ ಸಿ ಸದಸ್ಯರಾಗಿದ್ದ ಗಣೇಶ್, ದಾಮೋದರ್ ನಾಯರ್, ಮಹಾಬಲ ರೈ, ಸುಕುಮಾರ ಮೂಲ್ಯ, ಜಯಶ್ರೀ, ಉಮೇಶ್, ಅಣ್ಣಿ ಎಂಬವರು ನಿರಂತರವಾಗಿ ಸುಮಾರು ಮೂರು ವರ್ಷಗಳಿಂದ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ. ವಿದ್ಯಾರ್ಥಿಗಳಿಂದ ಅಹಿತಕರ ಘಟನೆ ನಡೆಸಲು ಪ್ರೇರೆಪಿಸಿದ್ದಾರೆ.

ಗ್ರಾಮ ಸಭೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಎಕವಚನದಲ್ಲಿ ನಿಂದಿಸಿ ತೇಜೋವಧೆ ಮಾಡಿ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿ 7 ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಪುತ್ತೂರು 5 ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಪರ ವಕೀಲರಾದ ಮಾಧವ ಪೂಜಾರಿ ಮತ್ತು ನಿಶಾ ಕುಮಾರಿ ವಾದಿಸಿದರು.

You may also like

Leave a Comment