Home » Chikkamagaluru: ಸುಹಾಸ್ ಹತ್ಯೆ, ಪಹಲ್ಗಾಮ್​​ ಉಗ್ರರ ದಾಳಿ ಖಂಡಿಸಿ ಮೇ 05 ಕ್ಕೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಕರೆ!

Chikkamagaluru: ಸುಹಾಸ್ ಹತ್ಯೆ, ಪಹಲ್ಗಾಮ್​​ ಉಗ್ರರ ದಾಳಿ ಖಂಡಿಸಿ ಮೇ 05 ಕ್ಕೆ ಚಿಕ್ಕಮಗಳೂರು ಜಿಲ್ಲೆ ಬಂದ್​​ಗೆ ಕರೆ!

0 comments

Chikkamagaluru: ಪಹಲ್ಗಾಮ್​​ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನಾಳೆ (ಮೇ 05) ಬಂದ್​ಗೆ ಕರೆ ನೀಡಿದೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಚಿಕ್ಕಮಗಳೂರು (Chikkamagaluru) ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗದಳ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಪಾಕಿಸ್ತಾನದ ಮುಸ್ಲಿಂರು ಹಿಂದೂಗಳನ್ನ ಹತ್ಯೆ ಮಾಡುತ್ತಿದ್ದಾರೆ. ಭಜರಂಗದಳದ ಕಾರ್ಯಕರ್ತರನ್ನ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದಾರೆ. ಇದನ್ನ ಖಂಡಿಸಿ ನಾವು ಚಿಕ್ಕಮಗಳೂರು ಬಂದ್ ಕರೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು, ಹೋಟೆಲ್ ಬಂದ್ ಮಾಡಲು ಮನವಿ ಮಾಡಿರುವುದಾಗಿ ರಂಗನಾಥ್​ ಅವರು ತಿಳಿಸಿದ್ದಾರೆ.

You may also like