Home » Sullia: ಸುಳ್ಯ ಬಸ್ಸುಗಳ ನಡುವೆ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

Sullia: ಸುಳ್ಯ ಬಸ್ಸುಗಳ ನಡುವೆ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

0 comments

Sullia: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಎರಡು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ, 17 ಜನರಿಗೆ ಸಾಮಾನ್ಯ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕೆಎ21 F 0069 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್‌ಗೆ, ಮಡಿಕೇರಿ ಕಡೆಯಿಂದ ಸುಳ್ಯ ಮಾರ್ಗವಾಗಿ ಬರುತ್ತಿದ್ದ ಕೆಎ 19 F 3620 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಅಪಘಾತವಾಗಿದೆ. ಚಾಲಕನ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕರು ಹಾಗೂ ಉಪನಿರೀಕ್ಷಕರು ಭೇಟಿ ನೀಡಿದ್ದು, ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like