Sullia: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಲು ಉದ್ದೇಶಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಜನರ ಜನಪದ ಕಲೆಗಳು, ವಿಶಿಷ್ಟ ಆಚರಣೆಗಳು, ಕ್ರೀಡೆ, ವಿಜ್ಞಾನ, ಸಂಗೀತ, ರಂಗಭೂಮಿ, ಬಯಲಾಟ, ದೊಡ್ಡಾಟ, ಯಕ್ಷಗಾನ, ಸಾಹಿತ್ಯ, ಸಂಶೋಧನೆ, ರಾಜಕಾರಣಿಗಳು, ಮಹಿಳೆಯರು, ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತರು ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಅಕಾಡೆಮಿಗಳ ಪ್ರಶಸ್ತಿ ಪುರಸ್ಕೃತರ ಹೆಸರು, ಸಂಕ್ಷಿಪ್ತ ಪರಿಚಯ, ವಿಳಾಸ, ಸಂಪರ್ಕ ಸಂಖ್ಯೆ ಮೊದಲಾದ ವಿವರಗಳನ್ನು ಸಾಕ್ಷ್ಯ ಚಿತ್ರ ನಿರ್ಮಾಣಕ್ಕೆ ಬಳಸಲು ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಗೆ ನೀಡಲು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಸುಳ್ಯ ತಾಲೂಕು ಇವರು ವಿನಂತಿಸಿದ್ದಾರೆ.
Sullia: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿವಿಧ ಕ್ಷೇತ್ರಗಳ ಸಾಧಕರ ಮಾಹಿತಿ ನೀಡಲು ಮನವಿ
3
previous post
