2
Mangaluru: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುರತ್ಕಲ್ ಎನ್‌ಐಟಿಕೆ ಸಮೀಪ ಮೇಲ್ವೇತುವೆಯಿಂದ ಕೆಳಗಿನ ರಸ್ತೆಗೆ ಬಿದ್ದ ಘಟನೆ ಭಾನುವಾರ ಸಂಭವಿಸಿದೆ.
ಅಪಘಾತದಿಂದ ಅವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯಕ್ಷ ಅವರು ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ಕುಂದಾಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಮೇಲ್ವೇತುವೆಯಿಂದ ಕೆಳಗಿದ್ದ ಸರ್ವಿಸ್ ರಸ್ತೆಗೆ ಹಾರಿ ಪಲ್ಟಿಯಾಗಿದೆ.
