Home » Sullia: ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ!

Sullia: ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ!

0 comments

Sullia: 2022 ಮಾರ್ಚ್ ನಲ್ಲಿ ಸುಳ್ಯ (Sullia) ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ರೂ 1,50,000/-ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂಬಾತನನ್ನು, ಸುಳ್ಯ ಠಾಣಾ ಪೊಲೀಸರು ಜು.4ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ: Bantwala: ಬಂಟ್ವಾಳ: ಕರ್ತವ್ಯ ನಿರತ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿಯ ಬಂಧನ

You may also like