Home » RSS ಪಥಸಂಚಲನದಲ್ಲಿ ಭಾಗವಹಿಸಿದ್ದ PDO ಅಮಾನತು ವಿಚಾರ – ಆದೇಶಕ್ಕೆ ತಡೆ, ಸರ್ಕಾರಕ್ಕೆ ತೀವ್ರ ಮುಖಭಂಗ !!

RSS ಪಥಸಂಚಲನದಲ್ಲಿ ಭಾಗವಹಿಸಿದ್ದ PDO ಅಮಾನತು ವಿಚಾರ – ಆದೇಶಕ್ಕೆ ತಡೆ, ಸರ್ಕಾರಕ್ಕೆ ತೀವ್ರ ಮುಖಭಂಗ !!

0 comments

RSS: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದ್ದು, ಕೆಎಸ್‌ಎಟಿ ತಡೆ ನೀಡಿದೆ.

ಹೌದು ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಸಂಘದ ಸಮವಸ್ತ್ರ ಧರಿಸಿ, ಕೈನಲ್ಲಿ ದೊಣ್ಣೆ ಹಿಡಿದ ಗಣವೇಷಧಾರಿಯಾಗಿ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓ ಪ್ರವೀಣ್​ ಭಾಗವಹಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿತ್ತು.

ಅಮಾನತು ಬೆನ್ನಲ್ಲೇ ಪ್ರವೀಣ್​ ಜೊತೆ ಈ ಬಗ್ಗೆ ಚರ್ಚಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದರು. ಇದೀಗ ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಆಡಳಿತಾಅತ್ಮಕ ನ್ಯಾಯಮಂಡಳಿ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ಸರ್ಕಾರ ಹೊರಡಿಸಿದ್ದ ಅಮಾನತು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಈ ಕುರಿತು ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ಹಾಕಿದ್ದು ‘ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಒ ಪ್ರವೀಣ್ ಕುಮಾರ್ ಅವರ ಮೇಲೆ ಹೇರಲಾಗಿದ್ದ ಏಕಪಕ್ಷೀಯ ಅಮಾನತು ಆದೇಶವನ್ನು, ಮಾನ್ಯ ಕೆಎಸ್‌ಎಟಿ ಮುಂದೆ ನಮ್ಮ ಕಚೇರಿಯ ಕಾನೂನು ತಂಡ ಪ್ರಶ್ನಿಸಿತ್ತು. ರಾಜಕೀಯ ಒತ್ತಡದಿಂದ ಮಾಡಲಾಗಿದ್ದ ಅಮಾನತು ಆದೇಶಕ್ಕೆ ಇಂದು ಕೆಎಸ್‌ಎಟಿ ತಡೆ ನೀಡಿದೆ.’ ಎಂದು ತಿಳಿಸಿದ್ದಾರೆ.

ಅಲ್ಲದೆ ‘ಯಾವುದೇ ರೀತಿಯ ಬೆದರಿಕೆಯು, ಆರ್‌ಎಸ್‌ಎಸ್‌ನ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ತಡೆಯಲು ಸಾಧ್ಯವಿಲ್ಲ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ಸರ್ಕಾರಕ್ಕೆ ನೀಡಿದಂತಾಗಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಈ ಸಂದರ್ಭದಲ್ಲಿ ಸಹಕಾರ ನೀಡಿರುವ ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ ಅವರಿಗೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.

You may also like