Home » ಬೆಳ್ತಂಗಡಿ | ತಾ.ಪಂ.ಮಾಜಿ ಉಪಾಧ್ಯಕ್ಷ ಬಾವಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ | ತಾ.ಪಂ.ಮಾಜಿ ಉಪಾಧ್ಯಕ್ಷ ಬಾವಿಗೆ ಹಾರಿ ಆತ್ಮಹತ್ಯೆ

0 comments

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಲಾಯಿಲ ಅವರು ಶನಿವಾರ ಲಾಯಿಲ ಗ್ರಾಮದ ಆದರ್ಶನಗರದ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವರು ಕಳೆದ ಒಂದು ವರ್ಷ ಬೆಳ್ತಂಗಡಿ ನಗರದ ಸಮೀಪ ನಡೆದ ಅಪಘಾತದಲ್ಲಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದರು.

ಈ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಬೆಳ್ತಂಗಡಿ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಮೃತ ದೇಹವನ್ನು ಮೆಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.

You may also like

Leave a Comment