10
TET: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 7ರಂದು ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.
ಈ ಕುರಿತು ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಅಭ್ಯರ್ಥಿಗಳು ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶ ಹಾಗೂ ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ.
