ಸಹಾಯಕ ಪ್ರೊಫೆಸರ್ ಆಗ ಬಯಸುವವರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಆಯೋಗ ತಡೆಹಿಡಿದಿದ್ದು, ಇದರಿಂದ ಅದಷ್ಟು ಪ್ರೊಫೆಸರ್ ಹುದ್ದೆಗೆ ಸೇರಬಯಸುವವರಿಗೆ ನಿರಾಳವಾಗಿದೆ.
ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯ. ಆದರೆ ಈ ಬಾರಿ ಈ ನಿಯಮದಿಂದ ಅನುದಾನ ಆಯೋಗ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದಿರುವ ತನ್ನ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಆಯೋಗ ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪಿಎಚ್‌ಡಿಯನ್ನು ಕನಿಷ್ಠ ಅರ್ಹತೆಯನ್ನಾಗಿ ಮಾಡುವ ಯೋಜನೆಯನ್ನು ಮುಂದುವರಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಈ ಆದೇಶ ಹೊರಡಸಲಾಗಿದೆ ಎಂದಿರುವ ಆಯೋಗ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಜುಲೈ 2023ರ ಜುಲೈ 1ರ ಮುಂದೂಡಿದೆ. ಇದರ ಅರ್ಥ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂಬ ಈ ಆದೇಶವು 2023ರ ಜುಲೈ 1ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
2018 ರಲ್ಲಿ, ವಿಶ್ವವಿದ್ಯಾಲಯ ಅನುದಾನ ಆಯೋಗ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರವೇಶ ಮಟ್ಟದ ಹುದ್ದೆಗಳ ನೇಮಕಾತಿಗಳ ಮಾನದಂಡಗಳನ್ನು ನಿಗದಿ ಮಾಡಿತ್ತು. ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಮೂರು ವರ್ಷಗಳ ಗಡುವು ನೀಡಲಾಗಿತ್ತು. 2021-22ರ ಅವಧಿಗೆ ಇವರಿಗೆ ಬಡ್ತಿ ನೀಡುವ ಸಮಯದಲ್ಲಿ ಇದನ್ನು ಪರಿಗಣಿಸಬೇಕು ಎಂದ ಸೂಚಿಸಲಾಗಿತ್ತು. ಈ ಅವಧಿಯಲ್ಲಿ ಅವರು ಪಿಎಚ್‌ಡಿ ಮುಗಿಸಬೇಕು ಎಂದು ಹೇಳಲಾಗಿತ್ತು. ಅದನ್ನೀಗ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪಾಸಾದ ಸ್ನಾತಕೋತ್ತರ ಪದವೀಧರರು ಈ ಹುದ್ದೆಯಲ್ಲಿ ಸದ್ಯ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.
