Home » Bangalore: ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ; ಪತ್ನಿ ಅರೆಸ್ಟ್‌

Bangalore: ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ; ಪತ್ನಿ ಅರೆಸ್ಟ್‌

0 comments

Bangalore: ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

Photo credit: Indian Express

 

ಅತುಲ್‌ ಸುಭಾಷ್‌ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ನಿಖಿತಾ ಸಹೋದರ ಅನುರಾಗ್‌ ಸಿಂಘಾನಿಯಾ ಇವರುಗಳನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ನಿಖಿತಾರನ್ನು ಬಂಧನ ಮಾಡಲಾಗಿದೆ.

ನಿಕಿತಾ ಅವರನ್ನು ಹರಿಯಾಣದ ಗುರುಗ್ರಾಮದಲ್ಲಿ ಮತ್ತು ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಅವರನ್ನು ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ.

ಅತುಲ್ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು 3 ಕೋಟಿ ರೂ. ಮತ್ತು ಮಗನನ್ನು ನೋಡಲು ಭೇಟಿ ಹಕ್ಕುಗಳಿಗಾಗಿ 30 ಲಕ್ಷ ರೂ. ಬೇಡಿಕೆ ಇಟ್ಟಿರುವ ಆರೋಪವಿದೆ.

 

You may also like

Leave a Comment