5
Fire Catch: ಚಲಿಸುತ್ತಿದ್ದ ಸರ್ಕಾರಿ ಬಸ್ ತಾಂತ್ರಿಕ ದೋಷದಿಂದ ಬೆಂಕಿಗಾಹುತಿಯಾದ ಘಟನೆ ಮೈಸೂರಿನ ಬನ್ನೂರು ಬಳಿ ನಡೆದಿದೆ. ಇದು ಮೈಸೂರು ನಗರ ಸಾರಿಗೆ ಬಸ್ ಆಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ಅನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಕೂಡಲೇ ಪ್ರಯಾಣಿಕರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ನ ಮುಂಭಾಗ ಸುಟ್ಟು ಕರಕಲಾಗಿದ್ದು, ಬೆಂಕಿಯನ್ನು ಅಗ್ನಿಶಾಮಕ ದಳ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಗಮಿಸಿ ನಂದಿಸಿದೆ. ಘಟನಾ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಸಾರಿಗೆ ಬಸ್ ಚಲಿಸುತ್ತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಬಸ್ ಇಂಜಿನ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಎಂದು ಹೇಳಲಾಗುತ್ತಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಹತ್ತಾರು ಪ್ರಯಾಣಿಕರ ಪ್ರಾಣ ಉಳಿದಿದೆ.
