4
Accident: ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ (Accident)ಸಂಭವಿಸಿದ್ದು ಇಬ್ಬರು ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಫರಕ್ಕಾದಿಂದ ಲಾಲ್ಕಾಟಿಯಾಗೆ ಹೋಗುತ್ತಿದ್ದ ಗೂಡ್ಸ್ ರೈಲು ಬರ್ಹೆತ್‌ನಲ್ಲಿ ನಿಂತಿದ್ದ ಸರಕು ರೈಲಿಗೆ ಬೆಳಗಿನ ಜಾವ 3:30ರ ಸುಮಾರಿಗೆ ಡಿಕ್ಕಿ ಹೊಡೆದಿದೆ. ರೈಲು ಡಿಕ್ಕಿಯ ರಭಸಕ್ಕೆ ರೈಲಿನ ಇಂಜಿನ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನಲ್ಲಿ ಕಲ್ಲಿದ್ದಲು ತುಂಬಿದ್ದ ಹಿನ್ನಲೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ದೊಡ್ಡ ಪ್ರಮಾಣದಲ್ಲಿ ಉರಿಯಲು ಆರಂಭಿಸಿದೆ. ಪರಿಣಾಮ ರೈಲಿನಲ್ಲಿದ್ದ ಇಬ್ಬರು ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಮೂವರು ಸಿಐಎಸ್‌ಎಫ್ ಸಿಬ್ಬಂದಿಗೆ ಗಾಯಗಳಾಗಿವೆ.
