1
Accident: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್‌ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಮೃತರಲ್ಲಿ ನಾಲ್ವರು ಮಕ್ಕಳು ಹಾಗೂ ಒಂಬತ್ತು ಮಂದಿ ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಚಟೌಡ್ ಗ್ರಾಮದ ಕುಟುಂಬವೊಂದು ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಪ್ರಯಾಣಿಸುತ್ತಿದ್ದ ಟ್ರಕ್ ಎದುರಿಗೆ ಬರುತ್ತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
