Home » Mangalore: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ: ಕೃಷ್ಣ ಮಠಕ್ಕೆ ಹೊರಟಿದ್ದ ಮೂವರು ಸಾವು

Mangalore: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ: ಕೃಷ್ಣ ಮಠಕ್ಕೆ ಹೊರಟಿದ್ದ ಮೂವರು ಸಾವು

0 comments

Mangalore: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಇದರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿದ್ದ ರಮ್ಯ (23), ರವಿ (64), ನಂಜಮ್ಮ (75) ಮೃತರು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತ ಹೊಂದಿದ್ದಾರೆ.

ಕೀರ್ತಿ, ಸುಶೀಲಾ, ಬಿಂದು, ಪ್ರಶಾಂತ್‌ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

You may also like