Home » Kashmir: ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ: ಐದು ಐಇಡಿ ವಶ!

Kashmir: ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ: ಐದು ಐಇಡಿ ವಶ!

0 comments

Kashmir: ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯಾನಕ ಉಗ್ರ ದಾಳಿಯಿಂದ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ ಬಳಿಕ, ರಾಜ್ಯಾದ್ಯಂತ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ. ಇದರ ಭಾಗವಾಗಿ ಸೇನೆ ಹಾಗೂ ಜಮ್ಮು-ಕಾಶ್ಮೀರ (Kashmir) ಪೊಲೀಸ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣವೊಂದನ್ನು ಪತ್ತೆಹಚ್ಚಿದ್ದು, ಐದು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಟಿಫಿನ್ ಬಾಕ್ಸ್ ಮತ್ತು ಸ್ಟೀಲ್ ಬಕೆಟ್‌ಗಳಲ್ಲಿ ಮರೆಮಾಡಲಾಗಿದ್ದ ಐಇಡಿಗಳನ್ನು ಗಳನ್ನು ವಶಕ್ಕೆ ಪಡೆದಿದ್ದಾರೆ.

ಉಗ್ರರ ತಂಗುದಾಣಗಳನ್ನು ಧ್ವಂಸಗೊಳಿಸಲಾಗಿದ್ದು, ನೂರಾರು ಶಂಕಿತ ವ್ಯಕ್ತಿಗಳನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಈ ಘಟನೆಯ ನಂತರ ರಾಷ್ಟ್ರದ ಭದ್ರತೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರವಾಗಿ ಪ್ರತಿಕ್ರಿಯಿಸಿದ್ದು, “ಪ್ರತೀಕಾರ ಖಚಿತ” ಎಂದಿದ್ದಾರೆ.

You may also like