TET: ರಾಜ್ಯದ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಸಹಿಸುದ್ದಿ ನೀಡಿದ್ದು 5ನೇ ತರಗತಿವರೆಗಿನ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯಿತಿಯನ್ನು ನೀಡಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅಲ್ಲದೆ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದು ಅಧಿಕೃತವೂ ಆಗಿದೆ.
ಹೌದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದು, ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದರಿಂದ ಐದನೇ ತರಗತಿವರೆಗೆ ಬೋಧಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ. 6 ಮತ್ತು 7ನೇ ತರಗತಿ ಹಾಗೂ ಮುಂದುವರೆದ ತರಗತಿಗಳಿಗೆ ಟಿಇಟಿ ಅಗತ್ಯವೆಂದು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
