Home » Pejavara Shree: ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಪೇಜಾವರ ಶ್ರೀ ಹೇಳಿದ್ದೇನು?

Pejavara Shree: ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಪೇಜಾವರ ಶ್ರೀ ಹೇಳಿದ್ದೇನು?

0 comments
Udupi Pejavara Shree

Pejavara Shree: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ತಪಾಸಣೆ ಸಂದರ್ಭ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ.

ಈ ನಿಯಮ ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ್ದರೆ ಎಲ್ಲಾ ಕಡೆ ಇರಬೇಕಿತ್ತು. ಆದರೆ, ಪರೀಕ್ಷಾ ನಿಯಮಗಳಲ್ಲಿ ಇದು ಇಲ್ಲ. ಬ್ರಾಹ್ಮಣ ಸಮಾಜವನ್ನು ಅವಮಾನಿಸಬೇಕು ಎಂಬ ಉದ್ದೇಶದಿಂದ ಮಾಡಿದ ಕೃತ್ಯ ಇದಾಗಿದೆ. ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುವ ಸಾಧ್ಯತೆ ಇರುತ್ತದೆ.

ಇಂತಹ ಕೃತ್ಯ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆಗಳು ನಡೆಯುವುದಿಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಸರ್ಕಾರ ಎಚ್ಚರ ವಹಿಸಬೇಕು. ಇಂತಹ ಅಧಿಕಾರಿಗೆ ಕಟುವಾದ ಎಚ್ಚರಿಕೆ ನೀಡಬೇಕು ಎಂದು ಅವರು ಆಗ್ರಹಿಸಿದರು ಎಂದು ಶೃಂಗೇರಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರ ಆಶೀರ್ವಚನ ನೀಡುವ ವೇಳೆ ವಿಷಯ ಪ್ರಸ್ತಾಪಿಸಿರುವ ಕುರಿತು ಏಷ್ಯಾನೆಟ್‌ ಸುವರ್ಣ ಪ್ರಕಟ ಮಾಡಿದೆ.

You may also like