Bank Merger: ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಈ ಹಿಂದೆ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿತ್ತು. ಇದೀಗ ಮತ್ತೆ ಇದನ್ನು ಮುಂದುವರೆಸಲು ಹೊರಟಿರುವ ಸರ್ಕಾರವು, ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಮುಂದಾಗಿದೆ.
ಹೌದು, ಕರ್ನಾಟಕದ ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಹಾಗೂ ಕಾರ್ಪೋರೇಷನ್ ಬ್ಯಾಂಕ್‌ಗಳು ಹಿಂದಿನ ಬಾರಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯ ವೇಳೆ ವಿವಿಧ ಬ್ಯಾಂಕ್‌ಗಳೊಂದಿಗೆ ವಿಲೀನಗೊಂಡಿದ್ದವು. ಈಗ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸರ್ಕಾರಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಆರಂಭಿಸಿದೆ.
ಯಾವೆಲ್ಲಾ ಬ್ಯಾಂಕ್‌ಗಳು ವಿಲೀನ ಆಗಬಹುದು?
ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಬ್ಯಾಂಕ್ ಆಫ್ ಇಂಡಿಯಾ ಹಾಗು ಬ್ಯಾಂಕ್ ಆಫ್ ಮಹಾರಾಷ್ಟ್ರವನ್ನ ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ & ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರೀತಿಯ ದೊಡ್ಡ ದೊಡ್ಡ ಬ್ಯಾಂಕ್‌ಗಳ ಜೊತೆಗೆ ವಿಲೀನಗೊಳಿಸುವ ಪ್ರಸ್ತಾವನೆ ಸಿದ್ಧವಾಗಿದೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿದ್ದು, ಈ ವಿಚಾರ ಇದೀಗ ಜಗತ್ತಿನ ಗಮನ ಸೆಳೆಯುತ್ತಿದೆ.
ಅಂದಹಾಗೆ ಸರ್ಕಾರದ ಚಿಂತಕರ ಚಾವಡಿಯು ಕೆಲವು ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಾದ SBI, PNB, BoB ಮತ್ತು ಕೆನರಾ ಬ್ಯಾಂಕ್‌ಗಳನ್ನು ಮಾತ್ರ ಉಳಿಸಿಕೊಳ್ಳಲು ಪ್ರಸ್ತಾಪಿಸಿತು, ಆದರೆ ಉಳಿದವುಗಳಲ್ಲಿ ಸರ್ಕಾರಿ ಪಾಲನ್ನು ಖಾಸಗೀಕರಣಗೊಳಿಸುವುದು, ವಿಲೀನಗೊಳಿಸುವುದು ಅಥವಾ ಕಡಿಮೆ ಮಾಡುವುದನ್ನು ಪ್ರಸ್ತಾಪಿಸಲಾಗಿತ್ತು.
