Home » Ramesh Jarkiholi: ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ- ದೋಸ್ತಿ ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ

Ramesh Jarkiholi: ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ- ದೋಸ್ತಿ ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ

0 comments

Ramesh Jarkiholi: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುತ್ತಾರೆ ಎಂಬ ವಿಚಾರ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಇದೀಗ ಯತ್ನಾಳ್ ಅವರ ದೋಸ್ತಿ ರಮೇಶ್ ಜಾರಕಿಹೊಳಿ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಹೌದು, ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಾರಕಿಹೊಳಿಯವರು ಶಾಸಕ ಬಸನಗೌಡ ಪಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ ದುರದೃಷ್ಟಕರ. ಶಾಸಕ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಬಾರದಿತ್ತು. ಯತ್ನಾಳ್ ಬಿಜೆಪಿಯಲ್ಲಿಯೇ ಮುಂದುವರೆಯುತ್ತಾರೆ. ಎಲ್ಲಿಯೂ ಹೋಗಲ್ಲ. ಮೊನ್ನೆ ನಡೆದ ಶಾಸಕರ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದರು.

ಅಲ್ಲದೆ ಯತ್ನಾಳ್ ಹೊಸ ಪಕ್ಷದ ಬಗ್ಗೆ ಹೇಳಿದ್ದ ಉದ್ದೇಶವೇ ಬೇರೆ. ಆದರೆ ಮಾಧ್ಯಮಗಳಲ್ಲಿ ಬಂದಿರುವುದೇ ಬೇರೆ. ಹೊಸ ಪಕ್ಷ ಕಟ್ಟುವ ವಿಚಾರವಿಲ್ಲ. ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ಕೊಡಬೇಡಿ ಎಂದು ಹೇಳಿದ್ದೇವೆ. ಯತ್ನಾಳ್ ಮತ್ತೆ ಬಿಜೆಪಿಗೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

You may also like