Home » Vittla: ವಿಟ್ಲ: ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕರ ಮನೆಯಲ್ಲಿ ಕಳ್ಳತನ!

Vittla: ವಿಟ್ಲ: ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕರ ಮನೆಯಲ್ಲಿ ಕಳ್ಳತನ!

0 comments

Vittla: ವಿಟ್ಲ (Vittla) ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಕಳ್ಳತನ ನಡೆದಿರುವ ಬಗ್ಗೆ ದೂರು ದಾಖಲಾಗಿದೆ.

ರಜತ್ ಭಟ್ ತನ್ನ ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಕಿವಿ ಓಲೆ ಮತ್ತು ಸರ ದೋಚಿ ಪರಾರಿಯಾಗಿದ್ದು ಓಟ್ಟು ಎರಡು ಪವನ್ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:Sullia: ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಅಂತರಾಷ್ಟ್ರೀಯ ಯೋಗ ದಿನಾಚರಣೆ

You may also like